HomeEntertainmentಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ 'ಕೌಸಲ್ಯಾ ಸುಪ್ರಜಾ ರಾಮ' ಚಿತ್ರತಂಡ

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ ‘ಕೌಸಲ್ಯಾ ಸುಪ್ರಜಾ ರಾಮ’ ಚಿತ್ರತಂಡ

ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಮತ್ತೊಂದೆಡೆ ಡಾರ್ಲಿಂಗ್ ಕೃಷ್ಣ ‘ಕೌಸಲ್ಯಾ ಸುಪ್ರಜಾ ರಾಮ’ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಇದರ ಟೈಟಲ್ ಟ್ರ್ಯಾಕ್ ಸರಿಗಮಪ  youtube ನಲ್ಲಿ ಬಿಡುಗಡೆಯಾಗಿದೆ. ಚಿತ್ರತಂಡ ಈ ಟೈಟಲ್ ಟ್ರ್ಯಾಕ್ ಅನ್ನು ರಿಲೀಸ್ ಮಾಡುವ ಮೂಲಕ ಡಾರ್ಲಿಂಗ್ ಕೃಷ್ಣ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಶಾಂಕ್ ನಿರ್ದೇಶನದ ಈ ಚಿತ್ರವನ್ನು ಕೌರವ ಪ್ರೊಡಕ್ಷನ್ ಹೌಸ್ ಮತ್ತು ಶಶಾಂಕ್ ಸಿನಿಮಾಸ್ ಲಾಂಛನದಲ್ಲಿ ಬಿಸಿ ಪಾಟೀಲ್ ಹಾಗೂ ನಿರ್ದೇಶಕ ಶಶಾಂಕ್ ನಿರ್ಮಾಣ ಮಾಡಿದ್ದು, ಬೃಂದಾ ಆಚಾರ್ಯ, ಸುಧಾ ಬೆಳವಾಡಿ, ಡಾಕ್ಟರ್ ಭೂಷಣ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular