ಬೆಂಗಳೂರು: ದೆಹಲಿಯಲ್ಲಿ ಮಂಗಳವಾರ ನಡೆದ ಹೈಕಮಾಂಡ್ ಮಟ್ಟದ ಮ್ಯಾರನಾಥ್ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮುಂದಾಗಿದ್ದು, ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ನಯಲ್ಲಿ ನಾಯಕತ್ವ ಬದಲಾವಣೆಗೆ ಮುಹೂರ್ತ ಫಿಕ್ ಆಗಿದೆ. ಈ ಬೆಳವಣಿಗೆ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ.
ಹೈಕಮಾಂಡ್ ಬುಲಾವ್ ಮೇರೆಗೆ ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಡಿಸಿಎಂ ಡಿ.ಕೆ.,ಶಿವಕುಮಾರ್, ನಿನ್ನೆ ಹೈಕಮಾಂಡ್ ನಡೆಸಿದ ಸಭೆಯಲ್ಲಿ ಭಾಗಿಯಾಗಿದ್ದರು. ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗಿದೆ ಎಂದು ಹೇಲಲಾಗುತ್ತಿದೆಯಾದರೂ ಈಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಕಾಂಗ್ರೆಸ್ ನಾಯಕರಿಂದ ಬಂದಿಲ್ಲ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಅಮರ್ ದೆಹಲಿಯಲ್ಲಿಯೇ ಉಳಿದುಕೊಂಡಿದ್ದಾರೆ.
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸ್ಪಷ್ಟ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಸಿದ್ದರಾಮಯ್ಯ ಬಳಿಕ ಸಿಎಂ ಸ್ಥಾದ ಮೇಲೆ ಮೊದಲಿನಿಂದಲೂ ಕಟ್ಟಿರುವ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರಾ? ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ. ಸಿದ್ದರಾಮಯ್ಯ ರಾಜೀನಾಮೆ ಹಾಗೂ ಮುಂದಿನ ಸಿಎಂ ಆಯ್ಕೆ ಬಗ್ಗೆ ವರಿಷ್ಠರಿಂದ ಸ್ಪಷ್ಟನೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಯೇ ಬೀಡು ಬಿಟ್ಟಿದ್ದು, ಇಂದು ಮತ್ತೊಮ್ಮೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ಹೈಕಮಾಂಡ್ ಭೇಟಿ ಬಲಿಕ ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್, ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಕರೆದಿರುವ ಉಪಹಾರ ಕೂಟದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

