HomeKarnatakaತಮ್ಮ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಮಾಜಿ ಸಂಸದ ಶಿವರಾಮೇಗೌಡರಿಂದ ಅವಾಚ್ಯ ಶಬ್ದಗಳಿಂದ ನಿಂದನೆ

ತಮ್ಮ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಮಾಜಿ ಸಂಸದ ಶಿವರಾಮೇಗೌಡರಿಂದ ಅವಾಚ್ಯ ಶಬ್ದಗಳಿಂದ ನಿಂದನೆ

ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಇತ್ತೀಚೆಗಷ್ಟೇ ಬಿಜೆಪಿಗೆ ತಮ್ಮ ಬೆಂಬಲ ಘೋಷಿಸಿದ್ದು, ಇದರ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಕೂಡ ತಾವು ಬಿಜೆಪಿ ಸೇರುವುದಾಗಿ ಹೇಳಿದ್ದಾರೆ.

ಇದರ ಮಧ್ಯೆ ವ್ಯಕ್ತಿಯೊಬ್ಬರು 420 ಶಿವರಾಮೇಗೌಡ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು, ಇದರಿಂದ ಕೆಂಡಾಮಂಡಲವಾಗಿರುವ ಶಿವರಾಮೇಗೌಡ ಪೋಸ್ಟ್ ಹಾಕಿದ್ದಾರೆ ಎನ್ನಲಾದ ಮೋಹನ್ ಎಂಬುವರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ತಾವು ಈ ಪೋಸ್ಟ್ ಮಾಡಿಲ್ಲ. ಬೇರೆ ಯಾರೋ ಹಾಕಿರಬೇಕು ಎಂದು ಮೋಹನ್ ಹೇಳಿದರೂ ಸಹ ಇದನ್ನು ನಂಬದ ಶಿವರಾಮೇಗೌಡ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲ, ನಿನ್ನ ವಿರುದ್ಧ ಪೊಲೀಸರಿಗೆ ದೂರು ನೀಡುವುದಾಗಿಯೂ ಸಹ ಹೇಳಿದ್ದಾರೆ. ಶಿವರಾಮೇಗೌಡ ನಿಂದಿಸಿರುವ ಆಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular