ಬೆಳಗಾವಿ: ಮೂರು ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಪೀರನವಾಡಿ ಗ್ರಾಅಮದಲ್ಲಿ ಈ ಘಟನೆ ನಡೆದಿದೆ,
ಗಂಡನ ಮನೆಯವರು ಮಾಡಿದ್ದ ಸಾಲವನ್ನು ತೀರಿಸುವಂತೆ ಮಹಿಳೆಗೆ ಒತ್ತಡ ಹೇರುತ್ತಿದ್ದರು. ಪತಿ, ಅತ್ತೆ, ಮೈದುನ ಸೇರಿ ಎಲ್ಲರೂ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಮಹಿಳೆ ಮೂರು ವರ್ಷದ ಮಗನೊಂದಿಗೆ ಮನೆಯಲ್ಲಿಯೇ ಸಿರೇಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
28 ವರ್ಷದ ಪ್ರೇಮಾ ನಾಗೇಶ್ ಹಾಗೂ 3 ವರ್ಷದ ಮಗು ಭುವನ್ ಆತ್ಮಹತ್ಯೆ ಮಾಡಿಕೊಂಡವರು. ಪತಿ, ಅತ್ತೆ-ಮಾವ ಸೊಸೈಟಿಯಲ್ಲಿ 10 ಲಕ್ಷ ಸಾಲ ಮಾಡಿದ್ದರಂತೆ. ಆ ಸಾಲವನ್ನು ತೀರಿಸುವಂತೆ ಸೊಸೆಗೆ ಒತ್ತಡ ಹಾಕಿ ಕಿರುಕುಳ ನೀಡುತ್ತಿದ್ದಂರಂತೆ. ಇದರಿಂದ ಬೇಸತ್ತು ಮಗುವಿನೊಂದಿಗೆ ಮಹಿಳೆ ಸಾವಿಗೆ ಶರಣಾಗಿದ್ದಾರೆ. ಪತಿ, ಅತ್ತೆ, ಮಾವ, ಮೈದುನ ಸೇರಿದಂತೆ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

