HomeKarnatakaತಾಯಿ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಗಳು

ತಾಯಿ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಗಳು

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿ ಮೃತಪಟ್ಟ ಸುದ್ದಿ ತಿಳಿದ ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಈದು ನೂರಾಲ್ ಬೆಟ್ಟುಕಜೆ ಎಂಬಲ್ಲಿ ಈ ಘಟನೆ ನಡೆದಿದ್ದು, 25 ವರ್ಷದ ರೇಖಾ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇಖಾ ಅವರ ತಾಯಿ ಭಾಗಿ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ರೇಖಾ ಫ್ಯಾನ್ಸಿ ಅಂಗಡಿಯೊಂದಕ್ಕೆ ಕೆಲಸಕ್ಕೆ ಹೋಗಿದ್ದು, ಕರೆ ಮಾಡಿದ ಪರಿಚಿತರೊಬ್ಬರು ನಿಮ್ಮ ತಾಯಿ ಆರೋಗ್ಯ ಬಿಗಡಾಯಿಸಿದೆ ಎಂದು ಹೇಳಿದ್ದರು.

ವಾಪಸ್ ಮನೆಗೆ ಹೊರಟಿದ್ದ ರೇಖಾ ಮೊದಲೇ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿ ಮೃತಪಟ್ಟಿರಬಹುದು ಎಂಬ ಅನುಮಾನದ ಮೇರೆಗೆ ದಾರಿ ಮಧ್ಯದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular