ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ; 17 ಕುರಿಗಳ ದಾರುಣ ಸಾವು

ವಿಜಯನಗರ: ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ 17 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಬಳಿ ನಡೆದಿದೆ.

ಕಾನಹೊಳ್ಳಿ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ಪರಪ್ಪ ಎಂಬುವವರಿಗೆ ಸೇರಿದ 13 ಕುರಿಗಳು, 2 ಟಗರು, 2 ಮೇಕೆ ಮೃತಪಟ್ಟಿವೆ. ಸಧ್ಯ ಕುರಿಗಳ ಪಕ್ಕದಲ್ಲೇ ಇದ್ದ ಪರಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುರಿ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read