‘ತುಟ್ಟಿಭತ್ಯೆ’ ಬಿಡುಗಡೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಮನವಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಷ್ಕರ ನಡೆಸಲಾಗಿದ್ದು, ತಕ್ಷಣವೇ ಇದಕ್ಕೆ ಸರ್ಕಾರ ಸ್ಪಂದಿಸಿದ ಕಾರಣ ಅದೇ ದಿನದಂದು ಮುಷ್ಕರವನ್ನು ಹಿಂಪಡೆಯಲಾಗಿತ್ತು.

ಇದೀಗ ತುಟ್ಟಿಭತ್ಯೆ ಬಿಡುಗಡೆ ಮಾಡುವ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಹತ್ವದ ಮನವಿ ಸಲ್ಲಿಸಿದ್ದಾರೆ. 2023ರ ಜನವರಿ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ 2023ರ ಜನವರಿ 1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇಕಡ 4 ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ್ದು, ಹೀಗಾಗಿ ರಾಜ್ಯದಲ್ಲೂ ಸಹ ಇದೇ ರೀತಿಯಲ್ಲಿ ಶೇ.4 ತುಟ್ಟಿಭತ್ಯೆಯನ್ನು ಪೂರ್ವಾನ್ವಯವಾಗಿ ಜಾರಿಗೆ ಬರಲು ಮಂಜೂರು ಮಾಡಬೇಕೆಂದು ಷಡಾಕ್ಷರಿ ಮನವಿ ಸಲ್ಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read