HomeLatest Newsಕೆಂಪುಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟದ ಹಿಂದೆ ಜೈಶ್ ಉಗ್ರರ ಕೈವಾಡ: ಹೊಸ ವರದಿ...

ಕೆಂಪುಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟದ ಹಿಂದೆ ಜೈಶ್ ಉಗ್ರರ ಕೈವಾಡ: ಹೊಸ ವರದಿ ಬಿಡುಗಡೆ ಮಾಡಿದ ವಿಶ್ವಸಂಸ್ಥೆ ಭದ್ರತಾ ಮಂಡಳಿ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ನಡೆದಿದ್ದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೊಸ ವರದಿಯನ್ನು ಬಿಡುಗಡೆ ಮಾಡಿದೆ.

ವರದಿಯಲ್ಲಿ ಈ ದಾಳಿಯಲ್ಲಿ ಪಾಕಿಸ್ತಾನಿ ಉಗ್ರ ಸಂಘಟನೆ ಜೈಶ್-ಎ ಮೊಹಮ್ಮದ್ ಕೈವಾಡವಿತ್ತು ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ವಿಶ್ವಸಂಸ್ಥೆಯ 37 ನೇ ವರದಿಯು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನಂಟು ಇರುವುದನ್ನು ಖಚಿತಪಡಿಸಿದೆ.

ವರದಿ ಪ್ರಕಾರ, ಜೈಶ್ ಉಗ್ರ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಸದಸ್ಯ ರಾಷ್ಟ್ರವೊಂದು ಹೇಳಿದೆ. ವರದಿಯು ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ಪ್ರಶ್ನೆಗಳನ್ನು ಮತ್ತೆ ಹುಟ್ಟುಹಾಕಿದೆ. ಮಸೂದ್ ಅಜರ್ ಅಕ್ಟೋಬರ್ 8 ರಂದು ಪ್ರತ್ಯೇಕ ಮಹಿಳಾ ವಿಭಾಗವನ್ನು ರಚಿಸುವುದಾಗಿ ಘೋಷಿಸಿದ್ದಾನೆ. ಹೊಸ ವಿಭಾಗಕ್ಕೆ ಜಮಾತ್-ಉಲ್-ಮುಮಿನಾತ್ ಎಂದು ಹೆಸರಿಲಾಗಿದೆ. ಈ ವಿಭಾಗವನ್ನು ವಿಶ್ವಸಂಸ್ಥೆಯ ಪಟ್ಟಿಯಲ್ಲಿ ಸೇರಿಸಲಾಗಿಲ್ಲ, ಆದರೆ ಸಂಘಟನೆಯು ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಷಯದ ಬಗ್ಗೆ ಸದಸ್ಯ ರಾಷ್ಟ್ರಗಳಲ್ಲಿ ಭಿನ್ನಾಭಿಪ್ರಾಯವಿದೆ. ಒಂದು ದೇಶ ಜೈಶ್ ಉಗ್ರ ಸಂಘಟನೆ ಇನ್ನೂ ಸಕ್ರಿಯವಾಗಿದೆ ಎಂದು ಹೇಳಿಕೊಂಡರೆ, ಇನ್ನೊಂದು ದೇಶ ಜೈಶ್ ಈಗ ನಿಷ್ಕ್ರಿಯ ಎಂದು ಹೇಳಿದೆ. ನಿಷೇಧದ ನಂತರ ಜೈಶ್ ಉಗ್ರಸಂಘಟನೆ ಮತ್ತು ಲಷ್ಕರ್ ಇ ತೊಯ್ಬಾ ಇನ್ನು ಮುಂದೆ ಸಕ್ರಿಯವಾಗಿಲ್ಲ ಎಂದು ಪಾಕಿಸ್ತಾನ ಈಗಾಗಲೇ ಹೇಳಿದೆ. ವರದಿಯು ಪಹಲ್ಗಾಮ್ ದಾಳಿಯ ಬಗ್ಗೆಯೂ ಉಲ್ಲೇಖಿಸಿದೆ. ಏಪ್ರಿಲ್ 2025 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದರು. ಲಷ್ಕರ್‌ನ ಪ್ರತಿನಿಧಿ ಎಂದು ಪರಿಗಣಿಸಲಾದ ದಿ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯನ್ನು ನಡೆಸಿತ್ತು.

2025 ರ ಜುಲೈ 28ರಂದು ಮೂವರು ಶಂಕಿತರನ್ನು ಕೊಲ್ಲಲಾಯಿತು. ಮೇ ತಿಂಗಳಲ್ಲಿ, ಭಾರತ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳ ವಿರುದ್ಧ ಕ್ರಮ ಕೈಗೊಂಡಿತ್ತು. ನವೆಂಬರ್ 10, 2025 ರಂದು ನವದೆಹಲಿಯ ಕೆಂಪು ಕೋಟೆಯ ಬಳಿ ದಾಳಿ ನಡೆದಿತ್ತು. ದಾಳಿಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular