ದೆಹಲಿಗೆ ಹೋದರೂ ಕರ್ನಾಟಕ ಸಂಘದ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳದ ಕಸಾಪ ಅಧ್ಯಕ್ಷ…! ಇಲ್ಲಿದೆ ಇದರ ಹಿಂದಿನ ಕಾರಣ

ಶನಿವಾರದಂದು ನವದೆಹಲಿಯ ಕರ್ನಾಟಕ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನಗಾರಿ ಬಾರಿಸುವ ಮೂಲಕ ‘ಕನ್ನಡ ಡಿಂಡಿಮವ ಸಾಂಸ್ಕೃತಿಕ ಸಂಭ್ರಮ’ ಕ್ಕೆ ಚಾಲನೆ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿಯೇ ದೆಹಲಿಗೆ ಆಗಮಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ, ಇದರಲ್ಲಿ ಭಾಗವಹಿಸದೇ ಇರುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಈಗ ಇದರ ಹಿಂದಿನ ಕಾರಣವನ್ನು ಅವರೇ ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ನನ್ನನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿದ್ದರೂ ಸಹ ವೇದಿಕೆಯಲ್ಲಿ ಸ್ಥಾನ ಕೊಡದೆ ಅವಮಾನ ಮಾಡಲಾಗಿದೆ. ಇದು ನನಗೆ ಮಾಡಿದ ಅವಮಾನವಲ್ಲ, ಬದಲಿಗೆ ಕನ್ನಡ ಪ್ರಾತಿನಿಧಿಕ ಸಂಸ್ಥೆಗೆ ಮಾಡಿದ ಅವಮಾನವಾಗಿದೆ ಎಂದು ಹೇಳಿರುವ ಅವರು, ಈ ಕಾರಣಕ್ಕಾಗಿಯೇ ತಾವು ಗೈರು ಹಾಜರಾಗಿದ್ದಾಗಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read