
ಹೊಸಕೋಟೆ ತಾಲೂಕಿನ ಕಂಬಲಹಳ್ಳಿಯ ರಾಜು ಹಾಗೂ ವೈಟ್ ಫೀಲ್ಡ್ ಮೂಲದ ಆಟೋ ಚಾಲಕ ಸೋಮಶೇಖರ್ ಬಂಧಿತ ಆರೋಪಿಗಳಾಗಿದ್ದು, ಇವರುಗಳು ತಿಂಗಳ ಹಿಂದೆ ಹಾರ ತಂದಿದ್ದ ದೃಶ್ಯಾವಳಿಗಳು ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.
ಆ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ದೊಡ್ಡ ಬೆಳವಂಗಲ ಠಾಣೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರೂ ಸುಳಿವು ಸಿಕ್ಕಿರಲಿಲ್ಲ. ಶನಿವಾರದಂದು ಮತ್ತೆ ಹಾರ ನೀಡಲು ಬಂದಿದ್ದ ವೇಳೆ ಇವರನ್ನು ಗುರುತಿಸಿದ ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

