ದೇವಾಲಯದ ಹುಂಡಿಯನ್ನೇ ಹೊತ್ತೊಯ್ದ ಕಳ್ಳರು…!

ಮೂವರು ಕಳ್ಳರಿದ್ದ ಗುಂಪು ದೇವಾಲಯಕ್ಕೆ ನುಗ್ಗಿ ಹುಂಡಿ ಪೆಟ್ಟಿಗೆಯನ್ನು ಹೊತ್ತೊಯ್ದಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ವಡಗೋಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮುತ್ತಲಕೋಡಿ ಬೀರೇಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಇವರುಗಳು ಹುಂಡಿ ಪೆಟ್ಟಿಗೆ ತೆಗೆದುಕೊಂಡು ಹೋಗಿದ್ದು, ಎಂದಿನಂತೆ ಬೆಳಗ್ಗೆ ಅರ್ಚಕರು ಬಂದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಕಳ್ಳರ ಕರಾಮತ್ತು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಸದಲಗಾ ಠಾಣೆ ಪೊಲೀಸ್ ಅಧಿಕಾರಿಗಳು ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕಳ್ಳರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read