ದೇಶದಲ್ಲಿ ಮತ್ತೆ ಕೋವಿಡ್ ಹೆಚ್ಚಳ; ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ

ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಕಳೆದ ಹಲವು ತಿಂಗಳಿಂದ ಅತ್ಯಂತ ಕನಿಷ್ಠ ಪ್ರಮಾಣದಲ್ಲಿ ವರದಿಯಾಗುತ್ತಿದ್ದ ಸೋಂಕಿತರ ಸಂಖ್ಯೆಯಲ್ಲಿ ಈಗ ಮತ್ತೆ ಏರಿಕೆ ಕಂಡು ಬರುತ್ತಿದೆ. ಗುರುವಾರದಂದು ಒಂದೇ ದಿನ ಆರು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅತ್ಯಧಿಕ ಪ್ರಕರಣಗಳು ವರದಿಯಾಗಿವೆ.

24 ಗಂಟೆಗಳ ಅವಧಿಯಲ್ಲಿ ಗುರುವಾರದಂದು ಭಾರತದಲ್ಲಿ ಒಟ್ಟು 3,016 ಪ್ರಕರಣಗಳು ವರದಿಯಾಗಿದ್ದರೆ, ಕರ್ನಾಟಕದಲ್ಲಿ 288 ಪ್ರಕರಣಗಳು ದಾಖಲಾಗಿವೆ. ಮಹತ್ವದ ಸಂಗತಿ ಎಂದರೆ ಬುಧವಾರಕ್ಕೆ ಹೋಲಿಸಿದರೆ ಗುರುವಾರದಂದು ದೇಶದಲ್ಲಿ ಪ್ರಕರಣಗಳ ಸಂಖ್ಯೆ ಶೇಕಡ 40ರಷ್ಟು ಹೆಚ್ಚಾಗಿದೆ.

ಹೀಗಾಗಿ ಕೆಲವೊಂದು ರಾಜ್ಯಗಳಲ್ಲಿ ಮಾಸ್ಕ್ ನಿಯಮವನ್ನು ಮತ್ತೆ ಜಾರಿಗೆ ತರಲು ಚಿಂತನೆ ನಡೆಸಲಾಗಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈಗಾಗಲೇ ಈ ಕುರಿತು ಸೂಚನೆ ನೀಡಲಾಗಿದೆ. ನೆಗಡಿ, ಕೆಮ್ಮು, ಜ್ವರ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಹೇಳಲಾಗಿದೆ. ಇತರ ರಾಜ್ಯಗಳು ಸಹ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಶೀಘ್ರದಲ್ಲಿಯೇ ಈ ಕುರಿತ ಆದೇಶ ಹೊರಬೀಳುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read