HomeKarnatakaಗಮನಿಸಿ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ

ಗಮನಿಸಿ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ

ಬೆಂಗಳೂರು: ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ತಳ್ಳಿ ಹಾಕಿದ್ದು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಈ ಕುರಿತಂತೆ ಮಾಹಿತಿ ನೀಡಲಾಗಿದೆ.

‘ಹಿಜಾಬ್‌ ಪ್ರಸ್ತಾವನೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲʼ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದರು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ರಾಜ್ಯ ಸರ್ಕಾರ, ಶಾಲೆಗಳಲ್ಲಿ ಸಮವಸ್ತ್ರ ಧರಿಸಿ ಬರುವುದನ್ನು ಕಡ್ಡಾಯ ಮಾಡಿದ್ದು,  ಇದನ್ನು ಹೈಕೋರ್ಟ್‌ ಎತ್ತಿ ಹಿಡಿದಿತ್ತು. ಆ ಬಳಿಕ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಇಬ್ಬರು ನ್ಯಾಯಾಧೀಶರಿಂದ ಈ ಕುರಿತು ವಿಭಿನ್ನ ತೀರ್ಪು ಹೊರ ಬಿದ್ದಿತ್ತು. ಹೀಗಾಗಿ ಮತ್ತೊಂದು ಬೆಂಚ್‌ ಗೆ ಈ ವಿಚಾರ ವರ್ಗಾವಣೆಯಾಗಲಿದ್ದು,  ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದ ತೀರ್ಪನ್ನೇ ಮುಂದುವರೆಸಿಕೊಂಡು ಬರಲಾಗುತ್ತಿದೆ.

ಇನ್ನು ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಪಿಯು ಪರೀಕ್ಷೆಗೆ ಹಿಜಾಬ್‌ ಧರಿಸಿ ಬರುವುದಕ್ಕೆ ಅವಕಾಶ ನೀಡಲಾಗುವುದಿಲ್ಲ.  ಅಲ್ಲದೇ ಈ ಕಾರಣಕ್ಕೆ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು ಹಾಜರಾಗುತ್ತಾರೆ ಎಂದು ನಾನು  ಭಾವಿಸುವುದಿಲ್ಲವೆಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular