HomeKarnatakaದ್ವೇಷದ ರಾಜಕಾರಣ ಸಿದ್ದರಾಮಯ್ಯಗೆ ಶೋಭೆ ತರಲ್ಲ; ಕಿಡಿ ಕಾರಿದ ವಿ. ಸೋಮಣ್ಣ

ದ್ವೇಷದ ರಾಜಕಾರಣ ಸಿದ್ದರಾಮಯ್ಯಗೆ ಶೋಭೆ ತರಲ್ಲ; ಕಿಡಿ ಕಾರಿದ ವಿ. ಸೋಮಣ್ಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಕ್ಷೇತ್ರ ಹೈ ವೋಲ್ಟೇಜ್ ಕಣವಾಗಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಚಿವ ವಿ. ಸೋಮಣ್ಣ ಅಭ್ಯರ್ಥಿಯಾಗಿದ್ದಾರೆ. ಗುರುವಾರ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ಈಗ ನಾಯಕರುಗಳು ಪರಸ್ಪರರ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಗುರುವಾರ ನಾಗೇಶ್ ಎಂಬ ಬಿಜೆಪಿ ಕಾರ್ಯಕರ್ತನ ಮೇಲೆ ತೀವ್ರ ಹಲ್ಲೆ ನಡೆಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ವಿ. ಸೋಮಣ್ಣ, ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೂಂಡಾಗಿರಿ ನಡೆಸುತ್ತಿದೆ ಎಂದು ಕಿಡಿ ಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಪಕ್ಷದ ಕಾರ್ಯಕರ್ತರು ಪ್ರಚಾರಕ್ಕೆ ಹೋಗಲು ಕಾಂಗ್ರೆಸ್ ನವರು ಬಿಡುತ್ತಿಲ್ಲ. ಹೋದ ಸಂದರ್ಭದಲ್ಲಿ ಅದಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ದ್ವೇಷದ ರಾಜಕಾರಣ ಶೋಭೆ ತರುವುದಿಲ್ಲ ಎಂದ ಹೇಳಿದ ಸೋಮಣ್ಣ, ಸೋಲುವ ಭೀತಿಯಿಂದ ಇಂತಹ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular