HomeKarnatakaನನಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದು ಪರಮೇಶ್ವರ್, ಎಸ್.ಎಂ. ಕೃಷ್ಣ: ಸಿದ್ದರಾಮಯ್ಯಗೆ ಸಚಿವ ಸುಧಾಕರ್ ತಿರುಗೇಟು

ನನಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದು ಪರಮೇಶ್ವರ್, ಎಸ್.ಎಂ. ಕೃಷ್ಣ: ಸಿದ್ದರಾಮಯ್ಯಗೆ ಸಚಿವ ಸುಧಾಕರ್ ತಿರುಗೇಟು

ಸುಧಾಕರ್ ಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿ ನಾನು ತಪ್ಪು ಮಾಡಿದೆ. ಆತ ಒಬ್ಬ ಭ್ರಷ್ಟ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದು ಪರಮೇಶ್ವರ್ ಹಾಗೂ ಎಸ್.ಎಂ. ಕೃಷ್ಣ ಹೊರತು ಸಿದ್ದರಾಮಯ್ಯನವರಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಕಾಂಗ್ರೆಸ್ ಶಾಸಕನಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯನವರೊಂದಿಗೆ ವಿಶ್ವಾಸವಿತ್ತು. ಹಾಗಾಗಿ ಅವರನ್ನು ಬಹುತೇಕ ಸಂದರ್ಭಗಳಲ್ಲಿ ಸಮರ್ಥಿಸಿಕೊಂಡಿದ್ದೆ. ಆಗ ನಾನು ಸ್ವಾಮಿ ನಿಷ್ಠೆ ಹಾಗೂ ಪಕ್ಷ ನಿಷ್ಠೆಯನ್ನು ತೋರಿಸಿದ್ದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular