ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ; ವಿನಯ್ ಕುಲಕರ್ಣಿ ವಿಶ್ವಾಸ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಇವರಿಬ್ಬರೊಂದಿಗೆ ಕೆಲ ಶಾಸಕರುಗಳು ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಈಗಾಗಲೇ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಇದರ ಮಧ್ಯೆ ಸಚಿವ ಸ್ಥಾನದ ಆಕಾಂಕ್ಷಿಗಳು ತಮ್ಮ ಮನದಾಸೆಯನ್ನು ಬಿಚ್ಚಿಡುತ್ತಿದ್ದು, ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ, ಚುನಾವಣೆ ಪ್ರಚಾರ ಸಂದರ್ಭದಲ್ಲಿ ಪಕ್ಷದ ನಾಯಕರು ನೀಡಿದ್ದ ಭರವಸೆಯಂತೆ ತಮಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನುಡಿದಂತೆ ನಡೆಯುವ ನಾಯಕ. ಅವರು ರಾಜ್ಯದ ಜನತೆಗೆ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ. ಹಾಗೆಯೇ ಮೊದಲು ಹಿರಿಯರು ಸಚಿವರಾಗಲಿದ್ದು, ಬಳಿಕ ನಮ್ಮಗಳಿಗೆ ಅವಕಾಶ ಸಿಗುತ್ತದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read