HomeKarnatakaನವಿಲುಗರಿ ಹಾರ ಹಾಕಿದ್ದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್...!

ನವಿಲುಗರಿ ಹಾರ ಹಾಕಿದ್ದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್…!

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಕ್ಷೇತ್ರದ ಕರ್ನಾಟಕ ಸರ್ವೋದಯ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ನವಿಲುಗರಿ ಹಾರ ಹಾಕಿದ್ದ ಪ್ರಕರಣ ವಿವಾದಕ್ಕೆ ಕಾರಣವಾಗಿತ್ತು. ಅರಣ್ಯಾಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ನೋಟಿಸ್ ನೀಡಿದ್ದರು.

ಇದೀಗ ಈ ಪ್ರಕರಣ ಮತ್ತೊಂದು ಟ್ವಿಸ್ಟ್ ಪಡೆದಿದೆ. ಈ ಕುರಿತಂತೆ ಸ್ಪಷ್ಟನೆ ನೀಡಿರುವ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಹಾಕಿದ ಹಾರ ನಿಜವಾದ ನವಿಲು ಗರಿಯದ್ದಲ್ಲ. ಅದನ್ನು ಪ್ಲಾಸ್ಟಿಕ್ ನಿಂದ ತಯಾರಿಸಲಾಗಿತ್ತು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೆ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್‍.ಡಿ. ಕುಮಾರಸ್ವಾಮಿ ಅವರಿಗೂ ಇಂತಹುದೇ ಹಾರಗಳನ್ನು ಹಾಕಿದ್ದು, ಆಗ ನೋಟಿಸ್ ನೀಡದ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್ ಅವರಿಗೆ ಮಾತ್ರ ನೋಟಿಸ್ ನೀಡಿರುವುದರ ಹಿಂದೆ ರಾಜಕೀಯ ಹುನ್ನಾರವಿದೆ. ಎದುರಾಳಿ ರಾಜಕೀಯ ನಾಯಕರ ಕುಮ್ಮಕ್ಕು ಇದರ ಹಿಂದಿದೆ ಎಂದು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular