ನಾಟಕದಲ್ಲಿ ಸಿದ್ದರಾಮಯ್ಯ, ಡಿಕೆಗೆ ಅವಮಾನ; ದೂರು ದಾಖಲು…..!

ಮೈಸೂರು- ಸಾಂಬಶಿವ ನಾಟಕದಲ್ಲಿ ಸಿದ್ದರಾಮಯ್ಯ ಕುರಿತಂತೆ ಪದ ಬಳಕೆ ಮಾಡಿ ಅವಹೇಳನ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಈ‌ ಕುರಿತಂತೆ ನಾಟಕ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ. ಮೈಸೂರಿನ ರಂಗಾಯಣ ಶಿಬಿರದಲ್ಲಿ ನಾಟಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಹೌದು, ಚಂದ್ರಶೇಖರ ಕಂಬಾರರ ಸಾಂಬಶಿವ ಪ್ರಹಸನ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ಮಾಡಲಾಗಿತ್ತು. ಈ ನಾಟಕದಲ್ಲಿ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ನಾಟಕವನ್ನು ಪ್ರದರ್ಶನ ಮಾಡಿದ್ದಾರೆ‌ ಈ ವೇಳೆ ಭಾಗ್ಯಗಳನ್ನು ನೀಡಿ ಸೋಮಾರಿ ಮಾಡುತ್ತಿದ್ದೀರಿ. ಬರೀ ನಿದ್ದೆ ಮಾಡುತ್ತಿದ್ದೀರಿ ಎನ್ನುವ ಮಾತುಗಳನ್ನು ಹೇಳಲಾಗಿದೆ. ಈಗೆ ಹೇಳುತ್ತಿದ್ದಂತೆ ಅಲ್ಲಿದ್ದ ಕೆಲವು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ‌. ಅಷ್ಟೆ ಅಲ್ಲ ಇದನ್ನು ದುರುದ್ದೇಶಪೂರ್ವಕವಾಗಿ ಮಾಡಿದ್ದೀರಾ ಎಂದು ಕಿಡಿ ಕಾರಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರಿಗೆ ಅಷ್ಟೆ ಅಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕೂಡ ವ್ಯಂಗ್ಯವಾಡುವ ಮಾತುಗಳನ್ನು ಆಡಿದ್ದಾರೆ. ಹೀಗಾಗಿ ನಾಟಕ ತಂಡದಲ್ಲಿದ್ದ 18 ಮಂದಿ ವಿರುದ್ಧ ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಭಾನುವಾರ ದೂರು ನೀಡಿದ್ದಾರೆ. ಚುನಾವಣೆ ಹತ್ತಿರ ಇರೋದ್ರಿಂದ ಹೀಗೆಲ್ಲ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಸುಬ್ರಹ್ಮಣ್ಯ ಅವರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read