ನಾನು ಕೂಡ ಕೆಲವೊಂದು ಕಾರ್ಯಕ್ರಮಗಳಿಗೆ ಹೋಗಿರುವುದಿಲ್ಲ; ಹಾಗಂತ ಮುಸುಕಿನ ಗುದ್ದಾಟ ಅನ್ನಲಾಗುತ್ತಾ ? ಈಶ್ವರಪ್ಪ ಪ್ರಶ್ನೆ

ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ಬಿಜೆಪಿ ಸಮಾವೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಗೈರು ಹಾಜರಾಗಿದ್ದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಈ ಸಮಾರಂಭದಲ್ಲಿ ಭಾಗವಹಿಸಿದ್ದರೂ ಸೋಮಣ್ಣ ಅವರ ಗೈರು ಹಾಜರಿ ಅಚ್ಚರಿಗೆ ಕಾರಣವಾಗಿತ್ತು.

ಹೀಗಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸೋಮಣ್ಣ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಚಾಮರಾಜನಗರಕ್ಕೆ ತಾವು ಉಸ್ತುವಾರಿ ಸಚಿವರಾಗಿದ್ದರೂ ಸಹ ಪದಾಧಿಕಾರಿಗಳ ನೇಮಕದಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಅಸಮಾಧಾನ ಸೋಮಣ್ಣ ಅವರಿಗೆ ಇದೆ ಎಂದು ಹೇಳಲಾಗಿತ್ತು.

ಈ ಕುರಿತಂತೆ ಚಾಮರಾಜನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ. ಯಡಿಯೂರಪ್ಪ ಹಾಗೂ ಸೋಮಣ್ಣ ನಡುವೆ ಯಾವುದೇ ಮುಸುಕಿನ ಗುದ್ದಾಟ ಇಲ್ಲ. ನಾನು ಕೂಡ ಯಡಿಯೂರಪ್ಪನವರ ಕೆಲವು ಕಾರ್ಯಕ್ರಮಗಳಿಗೆ ಹೋಗಿಲ್ಲ. ಹಾಗೆಂದು ಇದನ್ನು ಮುಸುಕಿನ ಗುದ್ದಾಟ ಎಂದು ಕರೆಯಲಾಗುತ್ತದಾ ಎಂದು ಪ್ರಶ್ನಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read