ನಾನ್ಯಾಕೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿ ? ವರುಣಾ ಕ್ಷೇತ್ರದ ಸ್ಪರ್ಧೆ ವದಂತಿ ಕುರಿತು ಸಚಿವ ಸೋಮಣ್ಣ ಸ್ಪಷ್ಟನೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತಾದರೂ ಇದೀಗ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಪ್ರಬಲ ಸ್ಪರ್ಧೆ ಒಡ್ಡುವ ಸಲುವಾಗಿ ಬಿಜೆಪಿಯಿಂದ ವಸತಿ ಸಚಿವ ವಿ. ಸೋಮಣ್ಣ ಅವರನ್ನು ವರುಣಾ ಕ್ಷೇತ್ರದಿಂದ ಕಣಕ್ಕಿಳಿಸಲಾಗುತ್ತದೆ ಎಂಬ ವದಂತಿ ಹರಿದಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಇದಕ್ಕೆ ಸ್ಪಷ್ಟನೆ ನೀಡಿರುವ ಸಚಿವ ಸೋಮಣ್ಣ, ಸಿದ್ದರಾಮಯ್ಯ ವಿರುದ್ಧ ನಾನ್ಯಾಕೆ ಸ್ಪರ್ಧಿಸಲಿ ? ವರುಣಾ ಕ್ಷೇತ್ರದಿಂದ ನಾನು ಕಣಕ್ಕಿಳಿಯುವುದಿಲ್ಲ. ನನ್ನ ಗಮನ ಏನಿದ್ದರೂ ಚಾಮರಾಜ ನಗರದತ್ತ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read