HomeKarnatakaನಾಮಪತ್ರ ಸಲ್ಲಿಸಿ ಕ್ಷೇತ್ರಕ್ಕೆ ಹೋಗದಿದ್ದರೂ ಚುನಾವಣೆಯಲ್ಲಿ ಗೆಲ್ಲುತ್ತೇನೆ; ಡಿಕೆಶಿಗೆ HDK ಟಾಂಗ್

ನಾಮಪತ್ರ ಸಲ್ಲಿಸಿ ಕ್ಷೇತ್ರಕ್ಕೆ ಹೋಗದಿದ್ದರೂ ಚುನಾವಣೆಯಲ್ಲಿ ಗೆಲ್ಲುತ್ತೇನೆ; ಡಿಕೆಶಿಗೆ HDK ಟಾಂಗ್

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಮೂರೂ ಪಕ್ಷಗಳ ನಾಯಕರು ರಾಜ್ಯದಾದ್ಯಂತ ಈಗಾಗಲೇ ಒಂದು ಸುತ್ತಿನ ಪ್ರಚಾರ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.

ಎಲ್ಲ ಪಕ್ಷಗಳ ನಾಯಕರು ಆರೋಪ – ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿಯವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಟೀಕಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರಿನಲ್ಲಿ ಮಾತನಾಡುವ ವೇಳೆ ಇದಕ್ಕೆ ಟಾಂಗ್ ನೀಡಿದ ಕುಮಾರಸ್ವಾಮಿಯವರು, ನಾನು ನಾಮಪತ್ರ ಸಲ್ಲಿಸಿ ಕ್ಷೇತ್ರಕ್ಕೆ ಹೋಗದಿದ್ದರೂ ಸಹ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಕನಕಪುರ ಕ್ಷೇತ್ರವೂ ಸಹ ಜೆಡಿಎಸ್ ತೆಕ್ಕೆಯಲ್ಲಿತ್ತು ಎಂದು ಹೇಳಿದ ಕುಮಾರಸ್ವಾಮಿಯವರು 2028ರ ವೇಳೆಗೆ ಕನಕಪುರ ಮತ್ತೆ ಬಿಜೆಪಿ ತೆಕ್ಕೆಗೆ ಬರಲಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular