ನಾಳೆ ಬಿಡುಗಡೆಯಾಗಲಿದೆ ‘ಬಾನ ದಾರಿಯಲ್ಲಿ’ ಟೀಸರ್

ಪ್ರೀತಮ್ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಬಾನ ದಾರಿಯಲ್ಲಿ’ ಸಿನಿಮಾ, ಹಾಡುಗಳ ಮೂಲಕವೇ ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು, ಇನ್ನೇನು ಬಿಡುಗಡೆಗೆ ಸಜ್ಜಾಗಿದೆ.

ನಾಳೆ ಈ ಚಿತ್ರದ ಟೀಸರನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.

ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಶ್ರೀ ವಾರೆ ಟಾಕೀಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದ್ದು,  ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್ ಹಾಗೂ ರೇಷ್ಮಾ ನಾಣಯ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read