ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮನೆಯಲ್ಲಿ ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬ್ರೇಕ್ ಫಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ರೇಕ್ ಫಾಸ್ಟ್ ಸಭೆಯ ಕುರಿತು ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆ ಮಾಹಿತಿ ಹಂಚಿಕೊಂಡಿದ್ದಾರೆ.
ನಾಳೆ ಸಿಎಂಗೆ ಉಪಾಹಾರ ಕೂಟ ಏರ್ಪಡಿಸಲಾಗಿದೆ. ಈ ವೇಳೆ ಜನರಿಗೆ ನಾವು ನೀಡಿರುವ ಮಾತುಗಳ ಬಗ್ಗೆ ಚರ್ಚೆ ನಡೆಯಲಿದೆ. ನಾನು, ಮುಖ್ಯಮಂತ್ರಿಗಳು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಬ್ರೇಕ್ ಫಾಸ್ಟ್ ಸಭೆಯ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನಾನು ಮತ್ತು ಮುಖ್ಯಮಂತ್ರಿಗಳು ಒಂದು ತಂಡವಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ.
ಕರ್ನಾಟಕಕ್ಕೆ ನಮ್ಮ ಭರವಸೆಗಳನ್ನು ಈಡೇರಿಸಲು ನಮ್ಮ ಸಾಮೂಹಿಕ ಪ್ರಯತ್ನಗಳನ್ನು ಚರ್ಚಿಸಲು ಮತ್ತು ಬಲಪಡಿಸಲು ನಾಳೆ ಮುಖ್ಯಮಂತ್ರಿಗಳನ್ನು ಉಪಾಹಾರಕ್ಕೆ ಆಹ್ವಾನಿಸಿದ್ದೇನೆ ಎಂದು ಡಿಸಿಎಂ ಡಿ.ಕೆ. ತಿಳಿಸಿದ್ದಾರೆ.
Me and the CM continue to work together as a team.
— DK Shivakumar (@DKShivakumar) December 1, 2025
I have invited the Hon’ble CM for breakfast tomorrow to discuss and strengthen our collective efforts to deliver on our promises to Karnataka.
