ಈ ಬಾರಿಯ ವಿಧಾನಸಭಾ ಫಲಿತಾಂಶದ ಕುರಿತು ಈಗ ಚರ್ಚೆಗಳು ಆರಂಭವಾಗಿದ್ದು, ನಿಚ್ಚಳ ಬಹುಮತದೊಂದಿಗೆ ಕಾಂಗ್ರೆಸ್ ಜಯ ಸಾಧಿಸಿದ್ದರ ಜೊತೆಗೆ ಆಡಳಿತಾರೂಢ ಬಿಜೆಪಿ ಹೀನಾಯ ಸೋಲಿಗೆ ಕಾರಣಗಳನ್ನು ಹುಡುಕಲಾಗುತ್ತಿದೆ. ಅಲ್ಲದೆ ತನ್ನ ಭದ್ರಕೋಟೆಯಲ್ಲೂ ಸಹ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದರ ಕುರಿತು ವಿಶ್ಲೇಷಿಸಲಾಗುತ್ತಿದೆ.
ಇದರ ಮಧ್ಯೆ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿರುವುದು ವಿಶೇಷ.