ನಿವೃತ್ತಿ ನಿರ್ಧಾರ ಹಿಂಪಡೆಯುವಂತೆ ಒತ್ತಾಯಿಸಿ ಈಶ್ವರಪ್ಪ ಬೆಂಬಲಿಗರ ಪ್ರತಿಭಟನೆ

ಶಿವಮೊಗ್ಗ: ಈಶ್ವರಪ್ಪ ಅವರ ನಿವೃತ್ತಿ ನಿರ್ಧಾರ ಹಿಂಪಡೆಯಬೇಕು ಮತ್ತು ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಅಥವಾ ಅವರ ಮಗ ಕಾಂತೇಶ್ ಅವರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಈಶ್ವರಪ್ಪನವರ ಬೆಂಬಲಿಗರು ಮತ್ತು ಬಿಜೆಪಿ ನಗರ ಸಮಿತಿಯ ಕೆಲವು ಸದಸ್ಯರು ಜಿಲ್ಲಾ ಬಿಜೆಪಿ ಕಚೇರಿ ಮುಂದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಟೈರಿಗೆ ಬೆಂಕಿ ಹಚ್ಚಲು ಯತ್ನಿಸಿ ತಮ್ಮ ಆಕ್ರೋಶ ಹೊರಹಾಕಿದ ಅವರು, ಪಕ್ಷದ ಹೈಕಮಾಂಡ್ ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಈ ಬಾರಿಯ ಚುನಾವಣೆಯನ್ನೇ ಬಹಿಷ್ಕರಿಸುತ್ತೇವೆ. ಅವರಿಗೆ ಟಿಕೆಟ್ ನೀಡಲೇಬೇಕು ಎಂದು ಪಟ್ಟು ಹಿಡಿದರು. ವಯೋಮಿತಿ ಹಿನ್ನೆಲೆಯಲ್ಲಿ ಟಿಕೆಟ್ ನಿರಾಕರಿಸುವುದಾದರೆ ಹೈಕಮಾಂಡ್ ಅವರ ಪುತ್ರ ಕಾಂತೇಶ್‌ಗೆ ಟಿಕೆಟ್ ನೀಡಲಿ ಎಂದು ಒತ್ತಾಯಿಸಿದರು.

ಕಳೆದ 40 ವರ್ಷಗಳಿಂದ ಪಕ್ಷ ಕಟ್ಟಿ ಬೆಳೆಸಿದ ಒಬಿಸಿ ನಾಯಕನಿಗೆ ಹೈಕಮಾಂಡ್ ಅವಮಾನಿಸಿದೆ. ಟಿಕೆಟ್ ನೀಡದೆ ಇದ್ದಲ್ಲಿ ಬಿಜೆಪಿ ಪರವಾಗಿ ಯಾರೂ ಕೂಡ ಕೆಲಸ ಮಾಡುವುದಿಲ್ಲ. ಸಾಮೂಹಿಕವಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ನಗರಾಧ್ಯಕ್ಷ ಜಗದೀಶ್ ಅವರಿಗೆ ಕೆಲ ಪದಾಧಿಕಾರಿಗಳು ರಾಜೀನಾಮೆ ಪತ್ರವನ್ನೂ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಚೇರಿ ಮುಂದೆ ಸ್ವಲ್ಪ ಕಾಲ ಗೊಂದಲದ ವಾತಾವರಣ ಉಂಟಾಗಿ ರಸ್ತೆ ಸಂಚಾರಕ್ಕೆ ಅಡ್ಡಿ ಆಯಿತು. ಬಿಜೆಪಿಯ ಹಿರಿಯ ನಾಯಕರು ಪ್ರತಿಭಟನಾ ನಿರತರಿಗೆ ಸಮಾಧಾನಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read