HomeIndiaನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ನೀಟ್ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಅವಕಾಶವೊಂದನ್ನು ನೀಡಿದೆ. 2026-27ನೇ ಸಾಲಿನ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET-UG 2026) ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಿಸಲಾಗಿದೆ.

ನೀಟ್ ವಿದ್ಯಾರ್ಥಿಗಳಿಗೆ ಈ ಹಿಂದೆ ಮಾರ್ಚ್ 8ಕ್ಕೆ ಮುಕ್ತಾಯವಾಗಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಇದೀಗ ಮಾರ್ಚ್ 11 ರ ರಾತ್ರಿ 9 ಗಂಟೆಯವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಮಾರ್ಚ್ 11ರ ರಾತ್ರಿ 11:59 ರವರೆಗೆ ಪಾವತಿಸಲು ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ (ಅಥವಾ ಜೈವಿಕ ತಂತ್ರಜ್ಞಾನ) ವಿಷಯಗಳೊಂದಿಗೆ ವಿಜ್ಞಾನ ವಿಭಾಗದಲ್ಲಿ ಇಂಟರ್ಮೀಡಿಯೇಟ್ ಅಥವಾ ಪಿಯುಸಿ ಉತ್ತೀರ್ಣರಾದ ಹಾಗೂ ಕನಿಷ್ಠ 17 ವರ್ಷ ವಯೋಮಿತಿ ಹೊಂದಿರುವ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 1700, ಇಡಬ್ಲ್ಯೂಎಸ್/ಒಬಿಸಿ-ಎನ್‌ಸಿಎಲ್ ವರ್ಗದವರಿಗೆ ರೂ. 1600 ಹಾಗೂ ಎಸ್‌ಸಿ/ಎಸ್‌ಟಿ/ದಿವ್ಯಾಂಗ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳಿಗೆ ರೂ. 1000 ನೋಂದಣಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಮೇ 3 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೇಶಾದ್ಯಂತ ಪೆನ್ ಮತ್ತು ಪೇಪರ್ (ಆಫ್‌ಲೈನ್) ಮಾದರಿಯಲ್ಲಿ ಪರೀಕ್ಷೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು 011-40759000/69227700 ಸಂಖ್ಯೆಗಳನ್ನು ಅಥವಾ [email protected] ಇ-ಮೇಲ್ ಅನ್ನು ಸಂಪರ್ಕಿಸಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular