ನೀತಿ ಸಂಹಿತೆ ಕಾರಣಕ್ಕೆ ಸಿಗದ ಪ್ರವಾಸಿ ಮಂದಿರದ ಕೊಠಡಿ; ಅಧಿಕಾರಿಗಳ ವಿರುದ್ಧ ಬಸವರಾಜ ಹೊರಟ್ಟಿ ಗರಂ

ಕೇಂದ್ರ ಚುನಾವಣಾ ಆಯೋಗ ಮಂಗಳವಾರದಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದು, ಅಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಮೇ 13 ರಂದು ಫಲಿತಾಂಶ ಹೊರ ಬೀಳಲಿದೆ.

ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಅಧಿಕಾರಸ್ತ ಚುನಾಯಿತ ಪ್ರತಿನಿಧಿಗಳು ಸರ್ಕಾರಿ ವಾಹನಗಳನ್ನು ಬಿಟ್ಟು ಖಾಸಗಿ ಕಾರುಗಳತ್ತ ಮುಖ ಮಾಡಿದ್ದಾರೆ. ಚುನಾವಣೆ ಘೋಷಣೆಯಾಗುವ ಸಂದರ್ಭದಲ್ಲಿ ವರುಣಾ ಕ್ಷೇತ್ರದ ಪ್ರವಾಸದಲ್ಲಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ದಾರಿ ಮಧ್ಯದಲ್ಲಿಯೇ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರನ್ನು ಏರಿದ್ದರು.

ಈಗ ನೀತಿ ಸಂಹಿತೆಯ ಬಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ತಟ್ಟಿದೆ. ಗುರುವಾರದಂದು ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿಜಯಪುರಕ್ಕೆ ಆಗಮಿಸಿದ್ದ ಅವರು ವಿಶ್ರಾಂತಿ ಪಡೆಯಲು ಪ್ರವಾಸಿ ಮಂದಿರದ ಕೊಠಡಿಯನ್ನು ಕೇಳಿದ್ದಾರೆ. ಆದರೆ ನೀತಿ ಸಂಹಿತೆ ಕಾರಣಕ್ಕೆ ಅಧಿಕಾರಿಗಳು ಕೊಠಡಿ ನೀಡಲು ನಿರಾಕರಿಸಿದ್ದಾರೆ.

ಇದರಿಂದ ಗರಂ ಆದ ಬಸವರಾಜ ಹೊರಟ್ಟಿ, ಪ್ರವಾಸಿ ಮಂದಿರವನ್ನು ರಾಜಕೀಯ ಸಭೆ, ಚಟುವಟಿಕೆಗಳ ಸಲುವಾಗಿ ದುರುಪಯೋಗ ಆಗಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ ಹೊರತು ಪ್ರವಾಸಿ ಮಂದಿರ ಬಂದ್ ಮಾಡಿ ಎಂದು ಹೇಳಿಲ್ಲ. ಈ ಕುರಿತಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read