ನೀತಿ ಸಂಹಿತೆ ಮಧ್ಯೆಯೂ ಸರ್ಕಾರಿ ಕಾರು ಬಳಸಿದ MLC ತಾರಾ; ವಿಡಿಯೋ ಶೇರ್ ಮಾಡಿದ ಕರ್ನಾಟಕ ರಾಷ್ಟ್ರ ಸಮಿತಿ

ಮೇ 10ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿರುವುದರಿಂದ ರಾಜ್ಯದಲ್ಲಿ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಅಧಿಕಾರದಲ್ಲಿರುವ ಚುನಾಯಿತ ಪ್ರತಿನಿಧಿಗಳು ಸರ್ಕಾರಿ ವಾಹನಗಳನ್ನು ಬಳಸಲು ನಿಷೇಧವಿದ್ದು, ಈಗಾಗಲೇ ಬಹುತೇಕ ವಾಹನಗಳನ್ನು ಹಿಂಪಡೆಯಲಾಗಿದೆ.

ಇದರ ಮಧ್ಯೆ ನಟಿ ಹಾಗೂ ವಿಧಾನಪರಿಷತ್ ಸದಸ್ಯರಾಗಿರುವ ಅನುರಾಧ ತಾರಾ ತಮ್ಮ ವೈಯಕ್ತಿಕ ಕಾರ್ಯಕ್ಕಾಗಿ ಸರ್ಕಾರಿ ಕಾರು ಬಳಸಿದ್ದು, ಇದರ ವಿಡಿಯೋವನ್ನು ಕರ್ನಾಟಕ ರಾಷ್ಟ್ರ ಸಮಿತಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದೆ.

ಈ ಸಂದರ್ಭದಲ್ಲಿ ಮಾತನಾಡಿರುವ ತಾರಾ, ನನಗೆ ನೀಡಲಾಗಿದ್ದ ಸರ್ಕಾರಿ ಕಾರನ್ನು ಈಗಾಗಲೇ ಹಿಂದಿರುಗಿಸಿದ್ದೇನೆ. ಇದು ಐಎಫ್ಎಸ್ ಅಧಿಕಾರಿಗೆ ಸೇರಿರುವ ಕಾರಾಗಿದ್ದು, ಆಸ್ಪತ್ರೆಗೆ ಹೋಗುವ ಸಲುವಾಗಿ ಬಳಸಿದ್ದೇನೆ ಎಂದಿದ್ದಾರೆ.

ಚುನಾವಣಾ ಪ್ರಚಾರ ಕಾರ್ಯಗಳಿಗೆ ಮಾತ್ರ ಸರ್ಕಾರ ವಾಹನ ಬಳಸುವಂತಿಲ್ಲ. ನಾನು ಆಸ್ಪತ್ರೆಗೆ ಹೋಗಲು ಈ ಕಾರನ್ನು ಬಳಸಿದ್ದೇನೆ ಎಂದು ಸಮರ್ಥಿಸಿಕೊಂಡ ಅವರು, ನಾನು ಈಗಲೂ ಕಚೇರಿಗೆ ಹೋಗಿ ಕೆಲಸ ಮಾಡಲು ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದ್ದಾರೆ.

https://www.youtube.com/watch?v=oWzU1s-xdUk

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read