ನೀರವ್ ಮೋದಿ – ಲಲಿತ್ ಮೋದಿಯಲ್ಲೂ ನಿಮ್ಮ ಹೆಸರಿನ ಮೋದಿ ಇದೆಯಲ್ಲವೇ; ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದೆಲ್ಲದರಲ್ಲಿಯೂ ‘ಇಂಡಿಯಾ’ ಇದೆ. ಇಂಡಿಯಾ ಎಂಬ ಹೆಸರನ್ನು ವಿಪಕ್ಷಗಳ ಮೈತ್ರಿ ಒಕ್ಕೂಟಕ್ಕೆ ಬಳಸಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ವಿರೋಧಪಕ್ಷಗಳ ಮೈತ್ರಿಕೂಟ – ‘ಇಂಡಿಯಾ’ವನ್ನು ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಪ್ರಧಾನಿ ನರೇಂದ್ರ ಮೋದಿಯವರೇ, ಭಾರತೀಯರ ನೂರಾರು ಕೋಟಿ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿ ಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಹೆಸರಿನಲ್ಲಿಯೂ ನಿಮ್ಮ ಹೆಸರಿನ ‘ಮೋದಿ’ ಇದೆಯಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ನೀರವ್ ಮೋದಿ, ಲಲಿತ್ ಮೋದಿಯವರನ್ನು ನಿಮ್ಮ ಜೊತೆ ಹೋಲಿಸಬಹುದಾ? ಲಲಿತ್, ನೀರವ್ ಹೆಸರಿನಲ್ಲಿಯೂ ಮೋದಿ ಇದೆಯಲ್ಲ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ?

ಮೋದಿಯವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ? ಎಂದು ಪ್ರಧಾನಿ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಸರಣಿ ಪ್ರಶ್ನೆ ಮುಂದಿಟ್ಟಿದ್ದಾರೆ.

ಒಟ್ಟಾರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಬಿಜೆಪಿ ನಾಯಕರು ಹಾಗೂ ವಿಪಕ್ಷ ನಾಯಕರ ವಾಕ್ಸಮರ ತಾರಕಕ್ಕೇರಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ವಾಕ್ಪ್ರಹಾರ ಮುಂದುವರೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read