ನುಡಿದಂತೆ ನಡೆದ HDK; ಜೆಡಿಎಸ್ ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಅನ್ನು ಸಾಮಾನ್ಯ ಕಾರ್ಯಕರ್ತನಿಗೆ ನೀಡುವುದಾಗಿ ಆರಂಭದಿಂದಲೂ ಹೇಳಿಕೊಂಡು ಬಂದಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಾವು ನುಡಿದಂತೆ ನಡೆದುಕೊಂಡಿದ್ದಾರೆ.

ಶುಕ್ರವಾರದಂದು ಜೆಡಿಎಸ್ ಎರಡನೇ ಪಟ್ಟಿ ಪ್ರಕಟಗೊಂಡಿದ್ದು, ಇದರಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಸ್ವರೂಪ್ ಅವರಿಗೆ ನೀಡಲಾಗಿದೆ. ತಮ್ಮ ಪತ್ನಿ ಭವಾನಿ ಅವರಿಗೆ ಟಿಕೆಟ್ ಕೊಡಿಸಲು ಎಚ್.ಡಿ. ರೇವಣ್ಣ ನಿರಂತರವಾಗಿ ಪ್ರಯತ್ನ ನಡೆಸಿದ್ದರಾದರೂ ಸಫಲವಾಗಲಿಲ್ಲ.

ಶುಕ್ರವಾರದಂದು ಎಚ್.ಡಿ. ರೇವಣ್ಣ ಅವರ ಮೂಲಕವೇ ಹಾಸನ ಕ್ಷೇತ್ರದ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿಸಲಾಗಿದ್ದು, ಈ ಮೂಲಕ ನಮ್ಮಿಬ್ಬರ ನಡುವೆ ಯಾವುದೇ ಅಸಮಾಧಾನವಿಲ್ಲ ಎಂಬ ಸಂದೇಶವನ್ನು ಹೆಚ್.ಡಿ.ಕೆ. ರವಾನಿಸಿದ್ದಾರೆ. ಜೊತೆಗೆ ಈ ವಿದ್ಯಮಾನ ಜೆಡಿಎಸ್ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಲೂ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read