HomeIndiaನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆ ಆಚರಿಸಲು ಮುಂದಾಗಿರುವ RSS ಯೋಜನೆಗೆ ಪುತ್ರಿ ಅನಿತಾ...

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆ ಆಚರಿಸಲು ಮುಂದಾಗಿರುವ RSS ಯೋಜನೆಗೆ ಪುತ್ರಿ ಅನಿತಾ ಬೋಸ್ ಆಕ್ಷೇಪ

ರಾಷ್ಟ್ರೀಯ ಸ್ವಯಂಸೇವಕ ಸಂಘ ಇದೆ 23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯನ್ನು ರಾಷ್ಟ್ರವ್ಯಾಪಿ ಆಚರಿಸಲು ಯೋಜನೆ ರೂಪಿಸಿದ್ದು ಇದಕ್ಕೆ ಸುಭಾಷ್ ಚಂದ್ರ ಬೋಸ್ ಅವರ ಪುತ್ರಿ ಅನಿತಾ ಬೋಸ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೊಲ್ಕತ್ತದಲ್ಲಿ ಮಾತನಾಡಿರುವ ಅವರು, ಎಲ್ಲ ಧರ್ಮಗಳನ್ನು ಗೌರವಿಸಬೇಕು ಎಂಬುದು ನಮ್ಮ ತಂದೆಯವರ ನಿಲುವಾಗಿತ್ತು. ಆದರೆ ಹಿಂದೂ ರಾಷ್ಟ್ರವನ್ನು ಪ್ರತಿಪಾದಿಸುತ್ತಿರುವ ಆರ್ ಎಸ್ ಎಸ್ ಹಾಗೂ ಬಿಜೆಪಿ ಸಿದ್ಧಾಂತ ಇದಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಇಂದು ಬದುಕಿದ್ದರೆ ಪ್ರಸ್ತುತ ಬಿಜೆಪಿ ಸರ್ಕಾರದ ನೀತಿ ನಿಯಮಗಳನ್ನು ಕಟುವಾಗಿ ವಿರೋಧಿಸುತ್ತಿದ್ದರು. ಆಗ ಬಿಜೆಪಿಯವರು ಅವರನ್ನು ಗೌರವಿಸುತ್ತಿರಲಿಲ್ಲ. ನಮ್ಮ ತಂದೆಯವರು ಎಡಪಂಥೀಯ ಸಿದ್ದಾಂತವನ್ನು ಹೊಂದಿದ್ದರು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular