HomeKarnatakaನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಬಸ್

ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಬಸ್

ಶಿವಮೊಗ್ಗ: ಖಾಸಗಿ ಬಸ್ ಒಂದು ನೋಡ ನೋಡುತ್ತಿದ್ದಂತೆಯೇ ರಸ್ತೆ ಬಳಿ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿ ನಡೆದಿದೆ.

ತಾಂತ್ರಿಕ ದೋಷದಿಂದಾಗಿ ಕಳೆದ ಮೂರು ದಿನಗಳಿಂದ ಬಸ್ ನಿಂತಿದ್ದ ಜಾಗದಲ್ಲಿಯೇ ಇತ್ತು. ಆದರೆ ಇಂದು ಇದ್ದಕ್ಕಿದ್ದಂತೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿಯ ಕೆನ್ನಾಲಿಗೆ ಇನ್ನೊಂದು ಬಸ್ ಗೂ ವ್ಯಾಪಿಸಿದ್ದು, ಆ ಬಸ್ ಕೂಡ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ

For Latest News Updates, Join Our Whatsapp Community🚩
RELATED ARTICLES

Most Popular