ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಹೋಂಡಾ ಸಿಟಿ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ.

ಸೋಮವಾರದಂದು ಉಜ್ಜನಿಪುರ ಆನೆಕೊಪ್ಪ ಎಂ ಪಿ ಎಂ ಬಡಾವಣೆ ಸಮೀಪ ಬೈಪಾಸ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಹಳೆ ನಗರದ ನಿವಾಸಿ ಶ್ರೀಕಾಂತ್ ಎಂಬವರಿಗೆ ಸೇರಿದ ಕಾರು ಇದಾಗಿದೆ.

ಹೋಂಡಾ ಸಿಟಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಅವರು ಬಂದು ಬೆಂಕಿ ನಂದಿಸಿದರಾದರು ಅಷ್ಟರೊಳಗಾಗಿ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read