HomeKarnatakaಪಕ್ಕದಲ್ಲೇ ಇದ್ದರೂ ಶಿವಕುಮಾರ್ ಹೆಸರೇಳಲು ಮರೆತ ಸಿದ್ದರಾಮಯ್ಯ...!

ಪಕ್ಕದಲ್ಲೇ ಇದ್ದರೂ ಶಿವಕುಮಾರ್ ಹೆಸರೇಳಲು ಮರೆತ ಸಿದ್ದರಾಮಯ್ಯ…!

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಬಿ. ಪಾಟೀಲ್ ಮೊದಲಾದವರು ಉಪಸ್ಥಿತರಿದ್ದರು.

ಜಗದೀಶ್ ಶೆಟ್ಟರ್ ಪಕ್ಷ ಸೇರ್ಪಡೆಗೂ ಮುನ್ನ ಪತ್ರಿಕಾಗೋಷ್ಠಿ ನಡೆಸಲಾಗಿದ್ದು, ಮೊದಲಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಸ್ವಾಗತಾರ್ಹ. ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದರು.

ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ ಅವರು ಪಕ್ಕದಲ್ಲೇ ಕೂತಿದ್ದ ಡಿ.ಕೆ. ಶಿವಕುಮಾರ್ ಹೆಸರು ಹೇಳುವುದನ್ನು ಮರೆತಿದ್ದು, ಮತ್ತೊಂದು ಬದಿಯಲ್ಲಿದ್ದ ಎಂ.ಬಿ. ಪಾಟೀಲ್ ಈ ಕುರಿತು ಗಮನ ಸೆಳೆದ ಬಳಿಕ ಡಿ.ಕೆ. ಶಿವಕುಮಾರ್ ಹೆಸರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular