HomeKarnatakaಪಕ್ಷದ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಮಹತ್ವದ ಸೂಚನೆ....!

ಪಕ್ಷದ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಮಹತ್ವದ ಸೂಚನೆ….!

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿದ್ದು, ಈ ಬಾರಿ ಅಧಿಕಾರ ಹಿಡಿಯಲೇಬೇಕೆಂಬ ಕಾರಣಕ್ಕೆ ಲೆಕ್ಕಾಚಾರದ ಹೆಜ್ಜೆ ಇಡುತ್ತಿವೆ.

ಇದರ ಮಧ್ಯೆ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಸೂಚನೆಯಂತೆ ಈಗ ಸುರಕ್ಷಿತ ಕ್ಷೇತ್ರ ವರುಣಾದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಪಕ್ಷದ ಉನ್ನತ ನಾಯಕರಿಗೆ ಕೆಲವೊಂದು ಮಹತ್ವದ ಸೂಚನೆಗಳು ನೀಡಿದೆ ಎಂದು ತಿಳಿದುಬಂದಿದೆ.

ರಾಜ್ಯ ಕಾಂಗ್ರೆಸ್ ನಾಯಕರ ಕರೆಗಳನ್ನು ಕದ್ದಾಲಿಸಲಾಗುತ್ತಿದೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಯಾವುದೇ ಅತಿ ಮುಖ್ಯ ವಿಚಾರಗಳನ್ನು ಮೊಬೈಲ್ ಅಥವಾ ದೂರವಾಣಿಯಲ್ಲಿ ಮಾತನಾಡಬಾರದು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಸಾರ್ವಜನಿಕ ಸಭೆಗಳಲ್ಲೂ ಸಹ ಮಾತನಾಡುವಾಗ ಯಾವುದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಎಂದು ಸಲಹೆ ನೀಡಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular