HomeKarnatakaಪಕ್ಷ ಸೇರ್ಪಡೆಗೂ ಮುನ್ನವೇ ಬಿಜೆಪಿ ಸಭೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಸಂಸದೆ ಸುಮಲತಾ...!

ಪಕ್ಷ ಸೇರ್ಪಡೆಗೂ ಮುನ್ನವೇ ಬಿಜೆಪಿ ಸಭೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಸಂಸದೆ ಸುಮಲತಾ…!

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಸುಮಲತಾ ಅಂಬರೀಶ್, ತಮಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ಆಹ್ವಾನವಿದ್ದು ಕ್ಷೇತ್ರದ ಮತದಾರರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು.

ಅಲ್ಲದೆ ಸುಮಲತಾ ಅಂಬರೀಶ್ ಅವರಿಗೆ ರಾಜ್ಯ ರಾಜಕಾರಣಕ್ಕೆ ಮರಳುವ ಇಚ್ಛೆ ಇದೆ ಎನ್ನಲಾಗಿದ್ದು, ಜೊತೆಗೆ ಪುತ್ರ ಅಭಿಷೇಕ್ ಅವರನ್ನೂ ಸಹ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಯಾವುದಾದರೊಂದು ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿತ್ತು.

ಇದೀಗ ಸುಮಲತಾ ಅಂಬರೀಶ್ ಪಕ್ಷ ಸೇರ್ಪಡೆಗೂ ಮುನ್ನವೇ ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ತಾವು ಬಿಜೆಪಿ ಸೇರ್ಪಡೆಯಾಗುವ ವಿಚಾರವನ್ನು ಪರೋಕ್ಷವಾಗಿ ಬಿಂಬಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 12ರಂದು ಮದ್ದೂರಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಬಿಜೆಪಿ ಮುಖಂಡರ ಸಭೆ ನಡೆದಿದ್ದು, ಈ ಸಭೆಯಲ್ಲಿ ಸುಮಲತಾ ಅಂಬರೀಶ್ ಪಾಲ್ಗೊಂಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular