ಚಿಕ್ಕಮಗಳೂರು: ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರಿನ ಕಡೂರಿನಲ್ಲಿ ನಡೆದಿದೆ.
ಕಾರಿಗೆ ಡಿಕ್ಕಿ ಹೊಡೆದ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದೆ. ಟ್ಯಾಂಕರ್ ನಿಂದ ಪೆಟ್ರೋಲ್ ಸೋರಿಕೆಯಾಗುತ್ತಿದೆ. ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮಹಿಳೆ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡೂರು ಠಾಣೆ ಪೊಲೀಸರು, ಅಗ್ನಿಶಾಅಕ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.