ಪತಿಗಿಂತ ಪತ್ನಿಗೆ ಹೆಚ್ಚು ಸಂಪಾದನೆಯಿದ್ದರೆ ಜೀವನಾಂಶವಿಲ್ಲ; ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಸೆಷನ್ಸ್ ಕೋರ್ಟ್

ತನ್ನ ಪತಿಗಿಂತ ಪತ್ನಿಗೆ ಹೆಚ್ಚು ಸಂಪಾದನೆ ಇದ್ದರೆ ಅಂತಹ ಪ್ರಕರಣಗಳಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಮುಂಬೈ ಸೆಷನ್ಸ್ ಕೋರ್ಟ್ ಎತ್ತಿ ಹಿಡಿದಿದೆ.

ಪ್ರಕರಣದ ವಿವರ: ಲೈಂಗಿಕ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಈ ವಿಷಯವನ್ನು ಪತ್ನಿಗೆ ಹೇಳಿರಲಿಲ್ಲ. ಇದರ ಮಧ್ಯೆ ಆಕೆ ಗರ್ಭಿಣಿಯಾಗಿ ಮಗು ಹೆತ್ತಿದ್ದು, ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತಿ ಜಗಳ ಶುರು ಮಾಡಿದ್ದ.

ಇವರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ ಬಳಿಕ ಪತ್ನಿಯನ್ನು ತವರು ಮನೆಗೆ ಕಳಿಸಲಾಗಿದ್ದು, 2011ರಲ್ಲಿ ಪತಿ ಕುಟುಂಬದವರ ವಿರುದ್ಧ ಕೌಟುಂಬಿಕ ಹಿಂಸೆ ಪ್ರಕರಣ ದಾಖಲಿಸಿದ್ದ ಆಕೆ, ಜೀವನಾಂಶ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದರ ವಿಚಾರಣೆ ನಡೆಸಿದ್ದ ಕೌಟುಂಬಿಕ ನ್ಯಾಯಾಲಯ, ಪತಿಗಿಂತ ಪತ್ನಿಗೆ ಹೆಚ್ಚು ವರಮಾನವಿರುವ ಕಾರಣ ಜೀವನಾಂಶ ಅಗತ್ಯವಿಲ್ಲ ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಪತ್ನಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮೆಟ್ಟಿಲೇರಿದ್ದು, ಈ ವೇಳೆ ಮಾಜಿ ಪತಿಗಿಂತಲೂ ಮಹಿಳೆಯ ಆದಾಯ 4 ಲಕ್ಷ ರೂಪಾಯಿ ಜಾಸ್ತಿ ಇದೆ. ಹೀಗಾಗಿ ಜೀವನಾಂಶ ನೀಡುವ ಅವಶ್ಯಕತೆ ಇಲ್ಲ ಎಂದು ಕೌಟುಂಬಿಕ ನ್ಯಾಯಾಲಯ ನೀಡಿರುವ ತೀರ್ಪು ಸರಿ ಇದೆ ಎಂದು ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read