
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವಿನಯ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಜಿಲ್ಲಾ ಪ್ರವೇಶಕ್ಕೆ ಅನುಮತಿ ಸಿಗದ ಹಿನ್ನೆಲೆಯಲ್ಲಿ ಅವರ ಪರವಾಗಿ ಪತ್ನಿ ಶಿವಲೀಲಾ ಕುಲಕರ್ಣಿ ಸೋಮವಾರದಂದು ನಾಮಪತ್ರ ಸಲ್ಲಿಸಿದ್ದಾರೆ.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿನಯ ಕುಲಕರ್ಣಿ ಅವರ ಜಿಲ್ಲಾ ಪ್ರವೇಶ ಕುರಿತಂತೆ ಮಂಗಳವಾರ ಕೋರ್ಟ್ ಆದೇಶ ಹೊರ ಬೀಳಲಿದೆ. ಒಂದೊಮ್ಮೆ ಅನುಮತಿ ಸಿಕ್ಕರೆ ಬೆಂಬಲಿಗರ ಜೊತೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು.

