HomeKarnatakaಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಸಾಧ್ಯತೆ

ಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಸಾಧ್ಯತೆ

ಮಂಗಳೂರು: ಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ರೂಪಾಯಿ ಪ್ಯಾಕೇಜ್ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಈ ಬಾರಿಯ ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಸಂಘದ ತಾಲೂಕು ಘಟಕದ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.
ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪತ್ರಕರ್ತರ ಕಲ್ಯಾಣಕ್ಕೆ 500 ಕೋಟಿ ಪ್ಯಾಕೇಜ್ ಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ಯಾಕೇಜ್ ಜಾರಿಯಾದಲ್ಲಿ ಪತ್ರಕರ್ತರ ಬೇಡಿಕೆ ಈಡೇರಲಿದೆ. ಅಲ್ಲದೆ, ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಮನವಿ ಮಾಡಿದ್ದು, ಸಿಎಂ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular