ನವದೆಹಲಿ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೂದಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.
ಗಡಿರಾಜ್ಯಗಳಾದ ಪಂಜಾಬ್, ಗುಜರಾತ್, ರಾಜಸ್ಥಾನ್ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಮೂರು ರಾಜ್ಯಗಳ ಗಡಿ ಭದ್ರತಾ ಕ್ರಮಗಳ ಬಗ್ಗೆ ಮಹಿತಿ ಪಡೆದಿದ್ದಾರೆ.
ನಾಗರಿಕರಿಗೆ ಯಾವುದೇ ಸಮಸ್ಯೆಯೆಯಾಗದಂತೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮೋದಿಯವರು ಸೂಚನೆ ನೀಡಿದ್ದಾರೆ.