
ಥ್ರಿಲ್ಲರ್ ಸಿನಿಮಾ ಎಂದು ಹೇಳಲಾಗುವ ಫಹಾದ್ ಫಾಸಿಲ್ ಅವರ ಪ್ಯಾನ್-ಇಂಡಿಯನ್ ಪ್ರಾಜೆಕ್ಟ್ ‘ಧೂಮಮ್’ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ (Hombale Films) ಬಂಡವಾಳ ಹೂಡಿದೆ.
ಈ ಸಿನಿಮಾದಲ್ಲಿ ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಕಾಂತಾರ ಸಿನಿಮಾದಲ್ಲಿ ನಟಿಸಿದ್ದ ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆದ ಟ್ರೇಲರ್ (Trailer) ಸಿನಿಮಾ ಬಗ್ಗೆ ಬಹಳಷ್ಟು ಕುತೂಹಲ ಮೂಡಿಸಿದ್ದು, ಜೂನ್ 23 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

