ಪಾಕ್ ಆರ್ಥಿಕ ಸಂಕಷ್ಟ; ಆರೋಗ್ಯ ಕ್ಷೇತ್ರಕ್ಕೂ ತಟ್ಟಿದ ಬಿಸಿ

ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಜನಸಾಮಾನ್ಯರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಮುಗಿಲು ಮುಟ್ಟಿರುವ ಪೆಟ್ರೋಲ್ – ಡೀಸೆಲ್ ಬೆಲೆ, ಆಹಾರ ಧಾನ್ಯಗಳ ಕೊರತೆಯಿಂದಾಗಿ ಜನ ಪರಿತಪಿಸುತ್ತಿದ್ದಾರೆ.

ಇದರ ಮಧ್ಯೆ ಆರ್ಥಿಕ ಸಂಕಷ್ಟದ ಬಿಸಿ ಈಗ ಆರೋಗ್ಯ ಕ್ಷೇತ್ರಕ್ಕೂ ತಟ್ಟಿದ್ದು, ಅಗತ್ಯ ಔಷಧಗಳ ಭಾರಿ ಕೊರತೆಯಾಗಿದೆ ಎಂದು ಹೇಳಲಾಗಿದೆ. ತುರ್ತು ಜೀವ ರಕ್ಷಕ ಔಷಧಗಳು ಇನ್ನು ಕೇವಲ ಎರಡು ವಾರಗಳಷ್ಟಕ್ಕೆ ಮಾತ್ರ ಲಭ್ಯವಿದೆ ಎನ್ನಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನ ಶೇಕಡಾ 90ರಷ್ಟು ಔಷಧ ಉತ್ಪನ್ನಗಳನ್ನು ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತಿದ್ದು, ಆದರೆ ಇದಕ್ಕೆ ಹಣ ಇಲ್ಲದಿರುವ ಕಾರಣ ಇಂತಹ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಸ್ಥಳೀಯವಾಗಿ ಔಷಧ ಉತ್ಪಾದಿಸುವ ಬಹುತೇಕ ಕಂಪನಿಗಳು ಸಹ ಕಚ್ಚಾ ವಸ್ತುಗಳ ಕೊರತೆ, ಬೆಲೆ ಏರಿಕೆ ಹಿನ್ನೆಲೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸಿವೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read