ಪಾನಪ್ರಿಯರೇ ಗಮನಿಸಿ: ಇಂದು ಮದ್ಯ ಮಾರಾಟ ‘ಬಂದ್’

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಈಗಾಗಲೇ ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಗ್ಗೆ 8:00 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, ಅದಕ್ಕೂ ಮುನ್ನ ಅಂಚೆ ಮತಗಳ ಎಣಿಕಾ ಕಾರ್ಯ ನಡೆಯಲಿದೆ.

ಇಂದು ಮತ ಎಣಿಕೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ ಜಾರಿಯಲ್ಲಿರಲಿದ್ದು, ಬಾರ್ ಅಂಡ್ ರೆಸ್ಟೋರೆಂಟ್ ಸೇರಿದಂತೆ ಯಾವುದೇ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ. ಭಾನುವಾರದಂದು ಎಂದಿನಂತೆ ಮದ್ಯ ಮಾರಾಟ ಮಳಿಗೆಗಳು ಕಾರ್ಯನಿರ್ವಹಿಸಲಿವೆ.

ಈ ಮೊದಲು ಮೇ 10 ರ ಬುಧವಾರದಂದು ಚುನಾವಣೆ ನಡೆದ ಕಾರಣಕ್ಕಾಗಿ ಸೋಮವಾರ ಸಂಜೆ 6 ಗಂಟೆಯಿಂದ ಬುಧವಾರ ಮಧ್ಯರಾತ್ರಿಯವರೆಗೂ ಮದ್ಯ ಮಾರಾಟ ಬಂದ್ ಮಾಡಲಾಗಿತ್ತು. ಶನಿವಾರವಾದ ಇಂದು ಮತ ಎಣಿಕೆ ಹಿನ್ನೆಲೆಯಲ್ಲಿ ಮತ್ತೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read