ಪಿಕ್ನಿಕ್ ಹೋದವರ ಮೇಲೆ ಹೆಜ್ಜೇನು ದಾಳಿ; ಆರು ಮಂದಿಗೆ ಗಾಯ

ಭಾನುವಾರದ ರಜೆ ಕಳೆಯಲು ಪಿಕ್ನಿಕ್ ತೆರಳಿದ್ದ ಗುಂಪಿನ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜಯನಗರ ಸಮೀಪದ ಮಳಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಣಂದೂರಿನ ಇಮ್ತಿಯಾಜ್, ಫೈಯಾಜ್ ಮತ್ತವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಮಳಲಿ ಗ್ರಾಮಕ್ಕೆ ತೆರಳಿ ಹಿನ್ನೀರು ಪ್ರದೇಶದಲ್ಲಿ ಮೀನು ಹಿಡಿಯಲು ಹೋದಾಗ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದವು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read