HomeKarnatakaಪೊಲೀಸರಿಂದ ತಪ್ಪಿಸಿಕೊಳ್ಳಲು ಸೇತುವೆಯಿಂದ ಜಿಗಿತ; ವ್ಯಕ್ತಿ ಸಾವು

ಪೊಲೀಸರಿಂದ ತಪ್ಪಿಸಿಕೊಳ್ಳಲು ಸೇತುವೆಯಿಂದ ಜಿಗಿತ; ವ್ಯಕ್ತಿ ಸಾವು

ಪ್ರಕರಣ ಒಂದರ ವಿಚಾರಣೆಗಾಗಿ ಪೊಲೀಸರು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಸೇತುವೆಯಿಂದ ಹಾರಿದ ವ್ಯಕ್ತಿ ಸಾವಿಗೀಡಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕಿನ ಕಬ್ಬಳ ನಿವಾಸಿ ಹರೀಶ್ ಮೃತಪಟ್ಟ ವ್ಯಕ್ತಿಯಾಗಿದ್ದು, ಈತನನ್ನು ಪ್ರಕರಣದ ವಿಚಾರಣೆಗೆ ಗಾಂಧಿನಗರ ಠಾಣೆ ಪೊಲೀಸರು ಕರೆದುಕೊಂಡು ಹೋಗುವ ವೇಳೆ ತೋಳಹುಣಸೆ ಸೇತುವೆ ಮೇಲಿನಿಂದ ಹಾರಿದ್ದರು.

ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರೀಶ್ ಸಾವಿಗೆ ಪೊಲೀಸರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸ್ಥಳಕ್ಕೆ ದಾವಣಗೆರೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular