ಪ್ರತಿ ಪೊಲೀಸ್ ಠಾಣೆಯಲ್ಲೂ ಸೈಬರ್ ವಿಂಗ್; ಗೃಹ ಸಚಿವರ ಘೋಷಣೆ

ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಹೆಚ್ಚುತ್ತಿರುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ಸುದ್ದಿಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಸೈಬರ್ ಅಪರಾಧದ ಪತ್ತೆಗಾಗಿ ಪ್ರತಿ ಪೊಲೀಸ್ ಠಾಣೆಯಲ್ಲೂ ‘ಸೈಬರ್ ವಿಂಗ್’ ಆರಂಭಿಸಲು ತೀರ್ಮಾನಿಸಲಾಗಿದ್ದು, ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ವಿಷಯ ತಿಳಿಸಿದ್ದಾರೆ.

ಅಲ್ಲದೆ ಫೇಕ್ ಸುದ್ದಿ ತಡೆಯುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟ್ವಿಟ್ಟರ್, ಗೂಗಲ್ ಮುಖ್ಯಸ್ಥರ ಜೊತೆ ಶೀಘ್ರದಲ್ಲೇ ಸಭೆ ನಡೆಸಿ ಇಂತಹ ವದಂತಿ ಹರಡುವವರನ್ನು ಗುರುತಿಸುವ ಮೂಲಕ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read