ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಗಣ್ಯರ ದಂಡು

ಶಿವಮೊಗ್ಗ: ಸೋಗಾನೆ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ ಇಂದು ಅದ್ಧೂರಿಯಾಗಿ ನೆರವೇರಿತು. ಪ್ರಧಾನಿ ಮೋದಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ರಾಘವೇಂದ್ರ, ಸಚಿವರಾದ ಆರಗ ಜ್ಞಾನೇಂದ್ರ, ನಾರಾಯಣ ಗೌಡ‌ ಸೇರಿದಂತೆ ಗಣ್ಯರ ದಂಡೇ ಆಗಮಿಸಿತ್ತು.

ಲಕ್ಷಾಂತರ ಜನರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ನಗರದ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿತ್ತು. ಬೆಳಿಗ್ಗೆಯಿಂದಲೇ ಜನ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳಿದ್ದ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗಿ ನಿಗದಿತ ಸಮಯಕ್ಕೆ ತೆರಳಲು ಅನೇಕರಿಗೆ ಸಾಧ್ಯವಾಗಲಿಲ್ಲ. ಸಾವಿರಾರು ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಎಲ್ಲರನ್ನು ತಪಾಸಣೆ. ಪರಿಶೀಲನೆಗೊಳಪಡಿಸಿ ಬಿಡಲಾಯಿತು.

ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಡಳಿತ ಪೊಲೀಸ್ ಇಲಾಖೆಯಿಂದ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾಧಿಕಾರಿ ಆರ್. ಸೆಲ್ವಮಣಿ , ಎಸ್‌ಪಿ ಮಿಥುನ್‌ಕುಮಾರ್ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ವ್ಯವಸ್ಥೆಯ ಉಸ್ತುವಾರಿ ವಹಿಸಿ ಲೋಪವಾಗದಂತೆ ನೋಡಿಕೊಂಡರು

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read