ಪ್ರಧಾನಿ ರೋಡ್ ಶೋ ದಿನದಂದೇ ನೀಟ್ ಎಕ್ಸಾಂ; ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಗಮನಕ್ಕಿರಲಿ ಈ ವಿಷಯ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮೇ 7 ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಅದೇ ದಿನ ನೀಟ್ ಎಕ್ಸಾಂ ಕೂಡ ಇದೆ. ರೋಡ್ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಸಂಚಾರ ವ್ಯವಸ್ಥೆ ನಿರ್ಬಂಧವಾಗಲಿದೆ.

ಮೇ 7ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧವಾಗಲಿದ್ದು, ಹೀಗಾಗಿ ಬೆಂಗಳೂರಿನಲ್ಲಿ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಅಂದು ನಿಗದಿತ ಅವಧಿಗಿಂತ ಮುಂಚೆಯೇ ಪರೀಕ್ಷಾ ಕೇಂದ್ರ ತಲುಪುವುದು ಸೂಕ್ತ.

ಅದರಲ್ಲೂ ಹೊರ ಭಾಗಗಳಿಂದ ಬಂದು ಬೆಂಗಳೂರಿನ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಿಂದಿನ ದಿನವೇ ಆಗಮಿಸಿ ತಮ್ಮ ಪರೀಕ್ಷಾ ಕೇಂದ್ರದ ಸಮೀಪ ವಸತಿ ವ್ಯವಸ್ಥೆ ಮಾಡಿಕೊಂಡರೆ ಅನುಕೂಲವಾಗಲಿದೆ. ಇಲ್ಲವಾದಲ್ಲಿ ನಿಗದಿತ ಸಮಯಕ್ಕೆ ತಲುಪಲು ಸಾಧ್ಯವಾಗದೆ ಪರೀಕ್ಷೆಯಿಂದ ವಂಚಿತರಾಗುವ ಸಂಭವವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read