ಬೆಂಗಳೂರು: ಕಾಮಗಾರಿ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.
ಜುಲೈ 6ರಂದು ಬೆಳಗ್ಗೆ 7ರಿಂದ 8 ಗಂಟೆಯವರೆಗೆ ಸಂಚಾರ ಸ್ಥಗಿತಗೊಳಿಸಲಾಗುವುದು. ಇಂದಿರಾನಗರ -ಬೈಯಪ್ಪನಹಳ್ಳಿಯ ನಡುವೆ ಮೆಟ್ರೋ ರೈಲು ಸಂಚಾರ ಸ್ಥಗಿತವಾಗಲಿದೆ.
ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾರ್ಯ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದಿರಾನಗರ- ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು. ಇತರ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳು ಕಾರ್ಯನಿರ್ವಹಿಸಲಿವೆ. ಪ್ರಯಾಣಿಕರು ತಾತ್ಕಾಲಿಕ ಬದಲಾವಣೆ ಗಮನಿಸುವಂತೆ ಕೋರಲಾಗಿದೆ.
ನಮ್ಮ ಮೆಟ್ರೋ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್ಸಿಎಲ್ ನಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.